ರಾಜ್ಯ

ವಿಪಕ್ಷ ನಾಯಕರ ತೇಜೋವಧೆಯ ಹುನ್ನಾರಕ್ಕೆ ರಾಜ್ಯ ಸರ್ಕಾರ ಪ್ರಯತ್ನ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ವಿಪಕ್ಷ ನಾಯಕರ ತೇಜೋವಧೆಯ ಹುನ್ನಾರಕ್ಕೆ ಪ್ರಯತ್ನ ಮಾಡುತ್ತಿದೆ ಎಂದು ವಿರೋಧದ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳು ಮತ್ತು ಹಗರಣಗಳಿಂದ ಜನರ ಗಮನ ಬೇರೆಡೆ ಸೆಳೆಯಲು ವಿಪಕ್ಷ ನಾಯಕರ ತೇಜೋವಧೆ ಮಾಡುವ ಹುನ್ನಾರ ನಡೆಸಿದೆ. ಅದಕ್ಕೆ ಪೂರಕವಾಗುವಂತೆ ಬಸ್ ದರ ಏರಿಕೆ ವಿರುದ್ಧ ನಿನ್ನೆ(ಜ.3) ಪ್ರತಿಭಟನೆ ಮಾಡುತ್ತಿರುವ ವೇಳೆ ಪೊಲೀಸರೊಂದಿಗೆ ನನ್ನ ವಾಗ್ವಾದದ ವಿಡಿಯೋ ತುಣುಕನ್ನು ಕಟ್ ಮಾಡಿ, ಎಡಿಟ್ ಮಾಡಿ ಹರಿಬಿಟ್ಟಿರುವುದು ಈ ಷಡ್ಯಂತ್ರದ ಭಾಗವೇ ಆಗಿದೆ ಎಂದು ಕಿಡಿಕಾರಿದೆ.

ಕಾಂಗ್ರೆಸ್‌ ಪಕ್ಷದ ಈ ಕುತಂತ್ರದ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ಸಲ್ಲಿಸಲಾಗಿದ್ದು, ನನ್ನ ತೇಜೋವಧೆ ಮಾಡಲು ಪ್ರಯತ್ನಿಸಿದ ತಪ್ಪಿತಸ್ಥರಿಗೆ ಶಿಕ್ಷೆ ಆಗುವವರೆಗೂ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

6 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

6 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

6 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

6 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

6 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

6 hours ago