ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಭೀಮ ಹೆಜ್ಜೆ ಯಾತ್ರೆ ಬಿಜೆಪಿಗರ ಅನೈತಿಕ ಯಾತ್ರೆಯಾಗಿದೆ ಎಂದು ಹೇಳಿದ್ದ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲಾ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರನ್ನು ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್‌ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಬಹುಮಾನ ಕೊಟ್ಟಿದ್ದೂ ಕೂಡ ಕಾಂಗ್ರೆಸ್ ಪಕ್ಷವೇ ಎಂದು ಕಿಡಿಕಾರಿದ್ದಾರೆ.
ಅಂಬೇಡ್ಕರ್ ಅವರ ಸೋಲಿಗೆ ಇಷ್ಟೆಲ್ಲಾ ಕುತಂತ್ರ, ಹುನ್ನಾರ ಮಾಡಿ ಅವರಿಗೆ ಭಾರತ ರತ್ನವನ್ನು ನಿರಾಕರಣೆ ಮಾಡಿದ ಕಾಂಗ್ರೆಸ್ ಪಕ್ಷ ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ವೀರ ಸಾವರ್ಕರ್ ಸಂಚು ಮಾಡಿದ್ದರು ಎಂದು ಹೇಳುವುದು ನಾಚಿಕೆಗೇಡಿನ ಪರಮಾವಧಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದಾನೆ.…
ನವದೆಹಲಿ: ಕೊರೊನಾ ವೈರಸ್ ಪರಿಣಾಮದಿಂದಾಗಿ ಸರಿಸುಮಾರು ಕಳೆದ ಐದು ವರ್ಷಗಳಿಂದ ನಿಂತು ಹೋಗಿದ್ದ ಕೈಲಾಸ ಮಾನಸ ಸರೋವರ ಯಾತ್ರೆ…
ಬೆಂಗಳೂರು: ಹೆಚ್ಚುತ್ತಿರುವ ವಲಸಿಗರ ಹಾವಳಿ, ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನನ್ನು ಅತ್ಯವಶ್ಯಕವಾಗಿ ರೂಪಿಸಬೇಕು ಎಂದು ಜೆಡಿಎಸ್ ರಾಜ್ಯ…
ಮಂಡ್ಯ: ಕೇಂದ್ರದ ಹಿಂದಿ ಹೇರಿಕೆಯನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಬಟ್ಟೆ ತೆಗೆದು ಅನುಚಿತವಾಗಿ ವರ್ತಿಸುತ್ತಿದ್ದ ಹೊರ ರಾಜ್ಯದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.…
ಚಾಮರಾಜನಗರ: ಇದೇ ಏಪ್ರಿಲ್.24ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ…