ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಭೀಮ ಹೆಜ್ಜೆ ಯಾತ್ರೆ ಬಿಜೆಪಿಗರ ಅನೈತಿಕ ಯಾತ್ರೆಯಾಗಿದೆ ಎಂದು ಹೇಳಿದ್ದ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲಾ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರನ್ನು ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್‌ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಬಹುಮಾನ ಕೊಟ್ಟಿದ್ದೂ ಕೂಡ ಕಾಂಗ್ರೆಸ್ ಪಕ್ಷವೇ ಎಂದು ಕಿಡಿಕಾರಿದ್ದಾರೆ.
ಅಂಬೇಡ್ಕರ್ ಅವರ ಸೋಲಿಗೆ ಇಷ್ಟೆಲ್ಲಾ ಕುತಂತ್ರ, ಹುನ್ನಾರ ಮಾಡಿ ಅವರಿಗೆ ಭಾರತ ರತ್ನವನ್ನು ನಿರಾಕರಣೆ ಮಾಡಿದ ಕಾಂಗ್ರೆಸ್ ಪಕ್ಷ ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ವೀರ ಸಾವರ್ಕರ್ ಸಂಚು ಮಾಡಿದ್ದರು ಎಂದು ಹೇಳುವುದು ನಾಚಿಕೆಗೇಡಿನ ಪರಮಾವಧಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…