Mysore
25
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

ಸ್ಪೀಕರ್‌ ಯು.ಟಿ.ಖಾದರ್‌ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಿಡಿ

ಬೆಳಗಾವಿ: ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿರುವ ಪೊಲೀಸರ ಕ್ರಮ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ.

ವಿಧಾನಸಭೆ ಅಧಿವೇಶನದಲ್ಲಿ ಗದ್ದಲ, ಕೋಲಾಹಲ ಜಾಸ್ತಿಯಾಗುತ್ತಿದ್ದಂತೆಯೇ ಸ್ಪೀಕರ್‌ ಯು.ಟಿ.ಖಾದರ್‌ ಅವರು ಕಲಾಪವನ್ನು ಮುಂದೂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ಪೀಕರ್‌ ನಡೆಗೆ ವಿಪಕ್ಷ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ಯಪಡಿಸಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಸ್ಪೀಕರ್‌ ಯು.ಟಿ.ಖಾದರ್‌ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಬಗ್ಗೆ ಚರ್ಚೆ ನಡೆಸಲು ಅವಕಾಶ ಕೊಟ್ಟಿಲ್ಲ. ಬೇರೆ ವಿಷಯಗಳ ಚರ್ಚೆಗೆ ಅವಕಾಶ ನೀಡಿದ್ದಾರೆ. ಸ್ಪೀಕರ್‌ ಯು.ಟಿ.ಖಾದರ್‌ ಮನಸೋ ಇಚ್ಛೆ ಅಧಿವೇಶನ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಲಾಠಿ ಚಾರ್ಜ್‌ ಬಗ್ಗೆ ಚರ್ಚೆಯಾಗಲೇಬೇಕು. ಅದನ್ನು ಬಿಟ್ಟು ಬೇರೆ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುತ್ತಿದ್ದಾರೆ. ಪಾಯಿಂಟ್‌ ಆಫ್‌ ಆರ್ಡರ್‌ ಎತ್ತಿದರೂ ಗಮನ ಹರಿಸುತ್ತಿಲ್ಲ ಎಂದು ಸ್ಪೀಕರ್‌ ವಿರುದ್ಧ ವಾಗ್ದಾಳಿ ನಡೆಸಿದರು.

 

Tags:
error: Content is protected !!