ಬೆಳಗಾವಿ: ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರ ಕ್ರಮ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ.
ವಿಧಾನಸಭೆ ಅಧಿವೇಶನದಲ್ಲಿ ಗದ್ದಲ, ಕೋಲಾಹಲ ಜಾಸ್ತಿಯಾಗುತ್ತಿದ್ದಂತೆಯೇ ಸ್ಪೀಕರ್ ಯು.ಟಿ.ಖಾದರ್ ಅವರು ಕಲಾಪವನ್ನು ಮುಂದೂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ಪೀಕರ್ ನಡೆಗೆ ವಿಪಕ್ಷ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ಯಪಡಿಸಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸ್ಪೀಕರ್ ಯು.ಟಿ.ಖಾದರ್ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಬಗ್ಗೆ ಚರ್ಚೆ ನಡೆಸಲು ಅವಕಾಶ ಕೊಟ್ಟಿಲ್ಲ. ಬೇರೆ ವಿಷಯಗಳ ಚರ್ಚೆಗೆ ಅವಕಾಶ ನೀಡಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಮನಸೋ ಇಚ್ಛೆ ಅಧಿವೇಶನ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಲಾಠಿ ಚಾರ್ಜ್ ಬಗ್ಗೆ ಚರ್ಚೆಯಾಗಲೇಬೇಕು. ಅದನ್ನು ಬಿಟ್ಟು ಬೇರೆ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುತ್ತಿದ್ದಾರೆ. ಪಾಯಿಂಟ್ ಆಫ್ ಆರ್ಡರ್ ಎತ್ತಿದರೂ ಗಮನ ಹರಿಸುತ್ತಿಲ್ಲ ಎಂದು ಸ್ಪೀಕರ್ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…