ರಾಜ್ಯ

ಸರ್ಕಾರ ತೊಲಗುವವರೆಗೂ ಕರ್ನಾಟಕದ ಏಳಿಗೆ ಸಾಧ್ಯವಿಲ್ಲ: ಆರ್.ಅಶೋಕ್‌ ಕಿಡಿ

ಬೆಂಗಳೂರು: ಈ ದರಿದ್ರ ಸರ್ಕಾರ ಇರುವವರೆಗೂ ಕರ್ನಾಟಕದ ಏಳಿಗೆ ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಬಾಣಂತಿಯರು ಸತ್ತರೂ ಪರವಾಗಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಂಡರೂ ಪರವಾಗಿಲ್ಲ. ಬೆಲೆ ಏರಿಕೆಯಿಂದ ಜನ ತತ್ತರಿಸಿದರೂ ಪರವಾಗಿಲ್ಲ. ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿದರೂ ಪರವಾಗಿಲ್ಲ. ಕರ್ನಾಟಕ ಅಭಿವೃದ್ಧಿ ಶೂನ್ಯವಾದರೂ ಪರವಾಗಿಲ್ಲ. ಆದರೂ ಕಾಂಗ್ರೆಸ್‌ ಸರ್ಕಾರ ಮಾತ್ರ ತನ್ನ ಪಾಡಿಗೆ ತಾನಿದೆ.

ಆಡಳಿತಕ್ಕೆ ಕರೀಬೇಡಿ, ಅಧಿಕಾರಕ್ಕೆ ಮರೀಬೇಡಿ ಅಂತಾಗಿರುವ ಈ ದರಿದ್ರ ಕಾಂಗ್ರೆಸ್‌ ಸರ್ಕಾರ ತೊಲಗುವವರೆಗೂ ಕರ್ನಾಟಕದ ಏಳಿಗೆ ಸಾಧ್ಯವಿಲ್ಲ. ಕರ್ನಾಟಕ ಕಾಂಗ್ರೆಸ್ ಮುಕ್ತ ಆಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

3 mins ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

2 hours ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

6 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

6 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

6 hours ago