ಬೆಂಗಳೂರು: ಹಣದ ಹೊಳೆ ಹರಿಸಿ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಉಪಚುನಾವಣೆ ಗೆದ್ದ ಮಾತ್ರಕ್ಕೆ ಮೂರು ಲೋಕವನ್ನೇ ಗೆದ್ದು ಬಿಟ್ಟೆವು ಎಂಬ ಭ್ರಮೆಯಲ್ಲಿದೆ ಕಾಂಗ್ರೆಸ್ ಪಕ್ಷ ಎಂದು ಲೇವಡಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ ಯಾವುದು ಸುಳ್ಳು, ಯಾವುದು ಅಪಪ್ರಚಾರ ಎಂದು ಪ್ರಶ್ನಿಸಿರುವ ಅಶೋಕ್ ಅವರು, ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಹಣ ಅವ್ಯವಹಾರ ಆಗಿದೆ ಎಂದು ತಾವೇ ಒಪ್ಪಿಕೊಂಡಿದ್ದೀರಿ.
ಇನ್ನು ಮುಡಾ ಹಗರಣದಲ್ಲಿ ತಮ್ಮ ಪತ್ನಿಯವರ ಹೆಸರಿನಲ್ಲಿರುವ 14 ಸೈಟು ವಾಪಸ್ಸು ಕೊಡುವ ಮೂಲಕ ಪರೋಕ್ಷವಾಗಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದೀರಲ್ಲ ಅದು ಸುಳ್ಳಾ ಎಂದು ಮತ್ತೊಮ್ಮೆ ಪ್ರಶ್ನೆ ಮಾಡಿದರು.
ತಮ್ಮ ಸರ್ಕಾರದ ಭ್ರಷ್ಟಾಚಾರಕ್ಕೆ, ಕಿರುಕುಳಕ್ಕೆ ಈವರೆಗೂ ನಾಲ್ಕು ಜನ ಪ್ರಾಮಾಣಿಕ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಸುಳ್ಳಾ? ನಿಮ್ಮ ಈ ಕುತಂತ್ರ, ಷಡ್ಯಂತ್ರ, ನಾಟಕ ಜಾಸ್ತಿ ದಿನ ನಡೆಯಲ್ಲ. ತಡವಾದರೂ ಸತ್ಯಕ್ಕೆ ಎಂದಿಗೂ ಜಯ ಸಿಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…