ರಾಜ್ಯ

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. ರಾಜ್ಯ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಮತ್ತೆ ಖಾಲಿ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರಿಂದ ಮಾರ್ಚ್‌ 11 ರಿಂದ ಒಪಿಡಿ ಬಂದ್‌ ಮಾಡಲಾಗುತ್ತದೆ. 37,000 ಕೋಟಿ ರೂ. ಬಾಕಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಾರ್ಚ್‌ 6 ರಂದು ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುತ್ತದೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳ ಪ್ರತಿಭಟನೆ ನಡೆಯಲಿದೆ. ಬಿಡದಿ ಟೌನ್‌ಶಿಪ್‌ ಯೋಜನೆ, ಸೆಣಬು ಸಬ್ಸಿಡಿ ಬಂದ್‌, ಕಬ್ಬು ಬಿಲ್‌ ಬಾಕಿ ವಿರುದ್ಧ ರೈತರಿಂದ ಬೀದಿಳಿಗಿದು ಪ್ರತಿಭಟನೆ ನಡೆಸಲಾಗುತ್ತಿದೆ. ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ. 38 ತಿಂಗಳ ಹಿಂಬಾಕಿಗಾಗಿ ಸಾರಿಗೆ ನೌಕರರಿಂದ ಮುಷ್ಕರ ನಡೆಯಲಿದೆ. ಅರಾಜಕ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಇಡೀ ಕರ್ನಾಟಕ ಇಂದು ಅರಾಜಕತೆಯಲ್ಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

43 mins ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

51 mins ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

6 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

6 hours ago