ಬೆಳಗಾವಿ: ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ವಿಪಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ಬ್ರಿಟೀಷರ ಒಡೆದು ಆಳುವ ನೀತಿಯನ್ನು ಅಳವಡಿಸಿಕೊಂಡು ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುತ್ತಿದೆ.
ಹಿಂದೂಗಳ ಆಸ್ತಿಯನ್ನು ಕಾಂಗ್ರೆಸ್ ಒಡೆಯುತ್ತಿದೆ. ಸಮಾಜದಲ್ಲಿ ಕಾಂಗ್ರೆಸ್ ವಕ್ಫ್ ಮೂಲಕ ಸಾಮರಸ್ಯ ಕೆಡಿಸುತ್ತಿದೆ. ವಕ್ಫ್ ನೋಟಿಸ್, ಪಹಣಿ ಗೊಂದಲ ನಿವಾರಣೆ ಮಾಡಬೇಕು. ಆಯಾಯ ರೈತರ ಹೆಸರಿಗೆ ಮತ್ತೆ ಪಹಣಿ ಬದಲಾವಣೆ ಆಗಬೇಕು. 1974ರ ವಕ್ಫ್ ಗೆಜೆಟ್ ಅಧಿಸೂಚನೆ ವಾಪಸ್ಸು ಪಡೆಯಬೇಕು. ಕೇಂದ್ರದ ವಕ್ಫ್ ತಿದ್ದುಪಡಿ ನಿಯಮಾವಳಿಗಳನ್ನು ನಮ್ಮ ರಾಜ್ಯ ಸರಳ ಬಹುಮತದಲ್ಲಿ ಪಾಸ್ ಮಾಡಬೇಕು ಎಂದು ಆಗ್ರಹಿಸಿದರು.
ಇನ್ನು ವಕ್ಫ್ ಬೋರ್ಡ್ ಮೂಲಕ ಕಾಂಗ್ರೆಸ್ ಸರ್ಕಾರವು ಹಿಂದೂಗಳ ಭೂಮಿ, ದೇವಸ್ಥಾನಗಳು ಮತ್ತು ಸ್ಮಶಾನ ಭೂಮಿಯನ್ನು ಕಬಳಿಸುತ್ತಿದೆ. ಬ್ರಿಟಿಷರ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್ ಅನುಸರಿಸುತ್ತಿದ್ದು, ಹಿಂದು-ಮುಸಲ್ಮಾನರ ನಡುವೆ ಕೋಮು ಸೌಹಾರ್ದತೆ ಸೃಷ್ಟಿಸುತ್ತಿದೆ. ರೈತರ ಪಹಣಿಗಳಲ್ಲಿ ವಕ್ಫ್ ಎಂಬ ಉಲ್ಲೇಖವನ್ನು ತೆಗೆದುಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಐತಿಹಾಸಿಕ ದೇವಾಲಯಗಳು, ಗೋಮಾಳಗಳು, ಶಾಲೆಗಳು ಮತ್ತು ಸಮಾಧಿ ಸ್ಥಳಗಳು ವಕ್ಫ್ ಆಸ್ತಿಯಾಗುತ್ತಿವೆ. ರಾತ್ರೋರಾತ್ರಿ ಪಹಣಿಗಳು ಬದಲಾಗುತ್ತಿವೆ ಎಂದು ಆರೋಪಿಸಿದರು.
ಇನ್ನು ವಕ್ಫ್‌ನಿಂದ ರೈತರಿಗೆ ನೋಟಿಸ್ ವಿಚಾರವಾಗಿ ಸದನದಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ನನ್ನ ನಡುವೆ ವಾಕ್ಸಮರ ನಡೆದಿದೆ. ವಕ್ಫ್ ಬೋರ್ಡ್ ನೋಟಿಸ್ ಕೊಟ್ಟಿರೋದು ತಪ್ಪಿಲ್ಲ ಅಂದರೆ ನಾನು ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಗೆ ನಿಲ್ಲುತ್ತೇನೆ. ಬೇಕಿದ್ರೆ ಸ್ಪೀಕರ್ ನನಗೆ ಛೀಮಾರಿ ಹಾಕಲಿ ಎಂದು ಸವಾಲು ಹಾಕಿದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…