ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಲು ಚಂದ್ರಶೇಖರಶ್ರೀ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಆಶೋಕ್ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಗೊತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು.
ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದು ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು ಎಂದು ಕಿಡಿಕಾರಿದ್ರು.