ರಾಜ್ಯ

ಸ್ವಾಮೀಜಿಗಳೇ ಹೇಳಿದರೋ ಅಥವಾ ಡಿಕೆಶಿನೇ ಹೇಳಿಸಿದ್ದಾರೋ ಗೊತ್ತಿಲ್ಲ : ಆರ್ ಅಶೋಕ್

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಗೆ ಸಿಎಂ ಸ್ಥಾನ ನೀಡಲು ಚಂದ್ರಶೇಖರಶ್ರೀ ಹೇಳಿಕೆ ವಿಚಾರಕ್ಕೆ  ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್‌ ಆಶೋಕ್‌ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳೇ  ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್‌ ಹೇಳಿಸಿದರೋ ಗೊತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು.

ಡಿಕೆ ಶಿವಕುಮಾರ್ ​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಹೇಳಿಕೆ ನೀಡಿದ್ದರು. ಈ  ವಿಚಾರವಾಗಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದು ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು ಎಂದು ಕಿಡಿಕಾರಿದ್ರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಇಂದು ದಿ.ಎಲ್.ಜಿ.ಹಾವನೂರು ಹುಟ್ಟುಹಬ್ಬ ; ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದ ಹಾವನೂರು

ಹಾವನೂರು ಆಯೋಗದ ವರದಿಯನ್ನು ಅಂದಿನ ಮುಖ್ಯಮಂತ್ರಿ ಅರಸು ಅವರು 'ಹಿಂದುಳಿದ ವರ್ಗಗಳ ಬೈಬಲ್' ಎಂದು ಬಣ್ಣಿಸಿದರೆ, ಸರ್ವೋಚ್ಚ ನ್ಯಾಯಾಲಯವು 'ಹಿಂದುಳಿದ…

7 mins ago

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ; ಸಲೀಸಲ್ಲ ಅನುಸರಣೆ

ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…

2 hours ago

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

3 hours ago

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

3 hours ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

3 hours ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

3 hours ago