ರಾಜ್ಯ

ಬೆಂಗಳೂರು ಒಡೆದರೆ ಕಾನೂನು ಹೋರಾಟ ; ಕಾಂಗ್ರೆಸ್‌ಗೆ ಅಶೋಕ ಎಚ್ಚರಿಕೆ

ಬೆಂಗಳೂರನ್ನು ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿದ್ದು ಮಾತನಾಡಿದ ಅವರು, ಗ್ರೇಟರ್‌ ಬೆಂಗಳೂರಿನಿಂದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ ಜನರಿಗೆ ಹೆಚ್ಚು ತೆರಿಗೆ ವಿಧಿಸಲಾಗಿದೆ. ಯಾರದ್ದೋ ಜಮೀನಿಗೆ ಬೆಲೆ ಹೆಚ್ಚುವಂತೆ ಮಾಡಲು ಇಂತಹ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ಕೆಂಪೇಗೌಡರ ಚಿಂತನೆಗೆ ದ್ರೋಹ ಬಗೆದಂತಾಗಿದೆ. ಬೆಂಗಳೂರು ಭಾಗವಾದರೆ ಆದಾಯ ಬರುವುದಿಲ್ಲ. ಐಟಿ ಬಿಟಿ ಕೇಂದ್ರಗಳು ಒಂದು ಕಡೆ ಇರುವಾಗ, ಮತ್ತೊಂದು ಕಡೆಗೆ ಆದಾಯವೇ ಬರುವುದಿಲ್ಲ. ಮೂರು ಪಾಲಿಕೆಗಳು ನಿರ್ಮಾಣವಾದರೆ ಅಲ್ಲಿ ಕನ್ನಡಿಗರೇ ಮೇಯರ್‌ ಆಗುತ್ತಾರೆ ಎಂಬ ಖಚಿತತೆ ಇಲ್ಲ ಎಂದರು.

ಮುಖ್ಯಮಂತ್ರಿಗಳು ಪಾಲಿಕೆಯಿಂದ ಆಯ್ಕೆಯಾಗುವುದಿಲ್ಲ ಎಂದಾದ ಮೇಲೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಅವರನ್ನು ಹೇಗೆ ಅಧ್ಯಕ್ಷರನ್ನಾಗಿ ಮಾಡುತ್ತಾರೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಕೆ ಸಭೆಯಲ್ಲಿ ಬಂದು ಕೂರಲು ಸಾಧ್ಯವಿಲ್ಲ. ಬೆಂಗಳೂರು ಭಾಗ ಆಗಬಾರದು ಎಂಬುದು ಬಿಜೆಪಿಯ ಅಭಿಪ್ರಾಯ. ಮುಂದೆ ನಮ್ಮ ಸರ್ಕಾರ ಬಂದರೆ ಬೆಂಗಳೂರನ್ನು ಒಂದು ಮಾಡುವ ಕೆಲಸ ಮಾಡುತ್ತೇವೆ. ಗ್ರೇಟರ್‌ ಬೆಂಗಳೂರಿಗೆ ವಿರುದ್ಧವಾಗಿ ಕಾನೂನು ಹೋರಾಟ ಮಾಡಲಿದ್ದೇವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಲಾಭಕ್ಕೆ ಎಲ್ಲವನ್ನೂ ಮಾಡುತ್ತಿದ್ದಾರೆ. ಬಿಡಿಎ ಲೇಔಟ್‌ಗಳು ಇನ್ನೂ ಖಾಲಿ ಇದ್ದು, ಅಲ್ಲಿಗೆ ನೀರು, ವಿದ್ಯುತ್‌ ಕೊಡಲು ಆಗುತ್ತಿಲ್ಲ. ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಈ ಯೋಜನೆ ಮಾಡಿದ್ದಾರೆ. ನಗರದಲ್ಲಿ ಎಲ್ಲ ಕಡೆ ಕಸದ ರಾಶಿ ಇದೆ, ಮೇಕೆದಾಟು ಯೋಜನೆ ಜಾರಿ ಮಾಡಿಲ್ಲ, ನಗರದ ಆಡಳಿತ ನಡೆಸಲು ಆಗುತ್ತಿಲ್ಲ. ಇಂತಹ ವಿಫಲತೆಯನ್ನು ಒಪ್ಪಿಕೊಳ್ಳದೆ ಇಂತಹ ಯೋಜನೆ ತಂದಿದ್ದಾರೆ ಎಂದು ಟೀಕಿಸಿದರು.

ಆಂದೋಲನ ಡೆಸ್ಕ್

Recent Posts

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…

31 mins ago

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆ: ಆತಂಕದಲ್ಲಿ ರೈತರು

ಬೆಂಗಳೂರು: ಒಂದೆಡೆ ಜೂನ್‍ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ…

52 mins ago

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಟ್ಟುಬಂದಿರುವ ನಾನು ಮತ್ತೆ ಆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ. ಇಂತಹ ವಿಚಾರಗಳು ಊಹಾಪೋಹ ಹಾಗೂ…

53 mins ago

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು: ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಟಿ.ನರಸೀಪುರ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ತಲಕಾಡಿನ…

1 hour ago

ಹನೂರು: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗೆ ಮುಂದುವರೆದ ಚಿಕಿತ್ಸೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಣೆ ಮಾಡಿ…

1 hour ago

ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ರಣ ಬಿಸಿಲು

ಬೆಂಗಳೂರು: ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲಿ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರುನಾಡು ಬಿಸಿಲ ಧಗೆಗೆ ಬಳಲಿ…

2 hours ago