ಬೆಂಗಳೂರನ್ನು ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿದ್ದು ಮಾತನಾಡಿದ ಅವರು, ಗ್ರೇಟರ್ ಬೆಂಗಳೂರಿನಿಂದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ ಜನರಿಗೆ ಹೆಚ್ಚು ತೆರಿಗೆ ವಿಧಿಸಲಾಗಿದೆ. ಯಾರದ್ದೋ ಜಮೀನಿಗೆ ಬೆಲೆ ಹೆಚ್ಚುವಂತೆ ಮಾಡಲು ಇಂತಹ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ಕೆಂಪೇಗೌಡರ ಚಿಂತನೆಗೆ ದ್ರೋಹ ಬಗೆದಂತಾಗಿದೆ. ಬೆಂಗಳೂರು ಭಾಗವಾದರೆ ಆದಾಯ ಬರುವುದಿಲ್ಲ. ಐಟಿ ಬಿಟಿ ಕೇಂದ್ರಗಳು ಒಂದು ಕಡೆ ಇರುವಾಗ, ಮತ್ತೊಂದು ಕಡೆಗೆ ಆದಾಯವೇ ಬರುವುದಿಲ್ಲ. ಮೂರು ಪಾಲಿಕೆಗಳು ನಿರ್ಮಾಣವಾದರೆ ಅಲ್ಲಿ ಕನ್ನಡಿಗರೇ ಮೇಯರ್ ಆಗುತ್ತಾರೆ ಎಂಬ ಖಚಿತತೆ ಇಲ್ಲ ಎಂದರು.
ಮುಖ್ಯಮಂತ್ರಿಗಳು ಪಾಲಿಕೆಯಿಂದ ಆಯ್ಕೆಯಾಗುವುದಿಲ್ಲ ಎಂದಾದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅವರನ್ನು ಹೇಗೆ ಅಧ್ಯಕ್ಷರನ್ನಾಗಿ ಮಾಡುತ್ತಾರೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಕೆ ಸಭೆಯಲ್ಲಿ ಬಂದು ಕೂರಲು ಸಾಧ್ಯವಿಲ್ಲ. ಬೆಂಗಳೂರು ಭಾಗ ಆಗಬಾರದು ಎಂಬುದು ಬಿಜೆಪಿಯ ಅಭಿಪ್ರಾಯ. ಮುಂದೆ ನಮ್ಮ ಸರ್ಕಾರ ಬಂದರೆ ಬೆಂಗಳೂರನ್ನು ಒಂದು ಮಾಡುವ ಕೆಲಸ ಮಾಡುತ್ತೇವೆ. ಗ್ರೇಟರ್ ಬೆಂಗಳೂರಿಗೆ ವಿರುದ್ಧವಾಗಿ ಕಾನೂನು ಹೋರಾಟ ಮಾಡಲಿದ್ದೇವೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಲಾಭಕ್ಕೆ ಎಲ್ಲವನ್ನೂ ಮಾಡುತ್ತಿದ್ದಾರೆ. ಬಿಡಿಎ ಲೇಔಟ್‌ಗಳು ಇನ್ನೂ ಖಾಲಿ ಇದ್ದು, ಅಲ್ಲಿಗೆ ನೀರು, ವಿದ್ಯುತ್ ಕೊಡಲು ಆಗುತ್ತಿಲ್ಲ. ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಈ ಯೋಜನೆ ಮಾಡಿದ್ದಾರೆ. ನಗರದಲ್ಲಿ ಎಲ್ಲ ಕಡೆ ಕಸದ ರಾಶಿ ಇದೆ, ಮೇಕೆದಾಟು ಯೋಜನೆ ಜಾರಿ ಮಾಡಿಲ್ಲ, ನಗರದ ಆಡಳಿತ ನಡೆಸಲು ಆಗುತ್ತಿಲ್ಲ. ಇಂತಹ ವಿಫಲತೆಯನ್ನು ಒಪ್ಪಿಕೊಳ್ಳದೆ ಇಂತಹ ಯೋಜನೆ ತಂದಿದ್ದಾರೆ ಎಂದು ಟೀಕಿಸಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…