ರಾಜ್ಯ

ಆರ್‌.ಅಶೋಕ್‌ ತಮ್ಮ ಕುರ್ಚಿ ನೋಡಿಕೊಳ್ಳಿ: ಸಚಿವ ದಿನೇಶ್‌ ಗುಂಡುರಾವ್‌

ಬೆಂಗಳೂರು: ಮೊದಲು ತಮ್ಮ ಕುರ್ಚಿ ಸರಿಯಾಗಿ ನೋಡಿಕೊಳ್ಳಿ ಎಂದು ಹೇಳುವ ಮೂಲಕ ಆರ್‌. ಅಶೋಕ್‌ರವರ ಸಿಎಂ ಕುರ್ಚಿ ಬದಲಾವಣೆ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ತಿರುಗೇಟು ನೀಡಿದ್ದಾರೆ. ‌

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಬೇರೆಯವರ ಕುರ್ಚಿಯ ಬಗ್ಗೆ ಮಾತನಾಡುವ ಮೊದಲು ತಮ್ಮ ಪಕ್ಷದಲ್ಲಿ ಸುದ್ದಿಯಾಗುತ್ತಿರುವ ರಾಜ್ಯಾಧ್ಯಾಕ್ಷ ಕುರ್ಚಿ ಸ್ಥಾನದ ಬಗ್ಗೆ ಗಮನ ನೀಡಿದರೆ ಒಳ್ಳೆಯದು. ಮುಂದೆ ಅವರೇ ವಿರೋಧ ಪಕ್ಷದ ನಾಯಕರಾಗಿ ಇರುತ್ತಾರೋ? ಅಥವಾ ಇರಲ್ವೋ? ಸುಮ್ಮನೆ ಯಾಕೆ ಭವಿಷ್ಯವಾಣಿ ನುಡಿಯುತ್ತಾರೆ. ಅಶೋಕ್‌ ಅವರೇ ಜನರ ಮುಂದೆ ನಗೆಪಾಟಲೀಗೀಡಾಗಬೇಡಿ ಎಂದು ವ್ಯಂಗ್ಯವಾಡಿದರು.

ಸಿಎಂ ಬದಲಾವಣೆ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ದಿನೇಶ್‌ ಗುಂಡೂರಾವ್‌, ಸಿಎಂ ಬದಲಾವಣೆ ಬಗ್ಗೆ ಯಾರು ಮಾತನಾಡಬಾರದು. ಈ ಬಗ್ಗೆ ಚರ್ಚೆ ಮಾಡದಂತೆ ಹೈಕಮಾಂಡ್‌ ಹೇಳಿದೆ. ಸಿಎಂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಇನ್ನು ಈ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

28 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

1 hour ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

1 hour ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

1 hour ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

1 hour ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago