ರಾಜ್ಯ

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು: ಆರ್‌ ಅಶೋಕ್‌

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು. ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹ ಎಂದು ಹೇಳಿದ್ದಾರೆ.

ಈ ಸಂಬಂಧ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಾಗು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ.

ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮರುಪರೀಕ್ಷೆಯನ್ನ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡುವುದು, ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ ಮಾಡುವುದು, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಸೇರಿದಂತೆ ಎಲ್ಲ ಅಂಶಗಳನ್ನ ಪರಿಗಣಿಸಿ ಈ ಹಿಂದೆ ಆದ ತಪ್ಪುಗಳು, ಲೋಪದೋಷಗಳು ಮರುಕಳಿಸದಂತೆ ಅತ್ಯಂತ ಜಾಗರೂಕತೆಯಿಂದ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು.

ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆಯಾಗದಂತೆ ಬ್ಲಾಕ್ ಲಿಸ್ಟ್ ಮಾಡಬೇಕು.

ಕೆಪಿಎಸ್‌ಸಿ ಪರೀಕ್ಷೆ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಪ್ರಶ್ನೆ ಆಗಿರುವುದರಿಂದ ಅವರ ಬದುಕಿನ ಜೊತೆ ಚೆಲ್ಲಾಟವಾಡದೆ, ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಸುವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ನಡೆಯುವಂತೆ ಎಚ್ಚರವಹಿಸಬೇಕು.

ಕೆಪಿಎಸ್‌ಸಿ ಪರೀಕ್ಷೆ ಕಡೆಗೆ ಈಗ ಇಡೀ ದೇಶವೇ ಎದುರು ನೋಡುತ್ತಿದ್ದು, ಇದು ಈಗ ಕೇವಲ ಅಭ್ಯರ್ಥಿಗಳ ಪರೀಕ್ಷೆಯಾಗಿ ಉಳಿದಿಲ್ಲ. ಇದು ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಒಂದು ಸತ್ವ ಪರೀಕ್ಷೆಯಾಗಿದೆ” ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

https://x.com/RAshokaBJP/status/1830521909735248225

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

2 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

5 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

5 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

5 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

5 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

5 hours ago