Mysore
27
light rain

Social Media

ಶುಕ್ರವಾರ, 24 ಜುಲೈ 2026
Light
Dark

ಕಾಂಗ್ರೆಸ್‌ ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿದೆ: ವಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಎನ್‌ಎಚ್‌ಎಂ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸುಳ್ಳು ಆಶ್ವಾಸನೆ ನೀಡಿ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಎನ್ಎಚ್ಎಂ ಅಡಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಹಾಗು ನೌಕರರನ್ನ ಖಾಯಂ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟಿದ್ದರು. ಬಳಿಕ ಅಧಿಕಾರಕ್ಕೆ ಬಂದ ಮೇಲೆ ಅವರಿಗೆ ವಿಶ್ವಾಸ ದ್ರೋಹ ಬಗೆದಿದೆ ವಾಗ್ದಾಳಿ ನಡೆಸಿದ್ದಾರೆ.

ಒಂದು ಕಡೆ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇವೆ. ಮತ್ತೊಂದು ಕಡೆ ಖಾಯಂ ಹುದ್ದೆ ಬೇಡಿಕೆಗಾಗಿ 30,000 ಗುತ್ತಿಗೆ ವೈದ್ಯರು, ನೌಕರರು ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ. ಅಲ್ಲದೇ ಕೊರೊನಾ ವೈರಸ್ ನಿಂದ ಬಚಾವಾದ ಕರ್ನಾಟಕದ ಜನತೆ, ಈಗ ಕಾಂಗ್ರೆಸ್ ವೈರಸ್ ನಿಂದ ಮುಕ್ತವಾಗಬೇಕಿದೆ ಎಂದು ಹೇಳಿದ್ದಾರೆ.

Tags:
error: Content is protected !!