ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಎನ್‌ಎಚ್‌ಎಂ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸುಳ್ಳು ಆಶ್ವಾಸನೆ ನೀಡಿ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎನ್ಎಚ್ಎಂ ಅಡಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಹಾಗು ನೌಕರರನ್ನ ಖಾಯಂ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟಿದ್ದರು. ಬಳಿಕ ಅಧಿಕಾರಕ್ಕೆ ಬಂದ ಮೇಲೆ ಅವರಿಗೆ ವಿಶ್ವಾಸ ದ್ರೋಹ ಬಗೆದಿದೆ ವಾಗ್ದಾಳಿ ನಡೆಸಿದ್ದಾರೆ.
ಒಂದು ಕಡೆ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇವೆ. ಮತ್ತೊಂದು ಕಡೆ ಖಾಯಂ ಹುದ್ದೆ ಬೇಡಿಕೆಗಾಗಿ 30,000 ಗುತ್ತಿಗೆ ವೈದ್ಯರು, ನೌಕರರು ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ. ಅಲ್ಲದೇ ಕೊರೊನಾ ವೈರಸ್ ನಿಂದ ಬಚಾವಾದ ಕರ್ನಾಟಕದ ಜನತೆ, ಈಗ ಕಾಂಗ್ರೆಸ್ ವೈರಸ್ ನಿಂದ ಮುಕ್ತವಾಗಬೇಕಿದೆ ಎಂದು ಹೇಳಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…