ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಎಸ್.ಎಂ.ಕೃಷ್ಣ ಅವರು ಶಾಸಕ, ಸಚಿವ, ಸ್ಪೀಕರ್, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅಪಾರವಾಗಿ ಶ್ರಮಿಸಿದ್ದಾರೆ. ಅಲ್ಲದೇ ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯವಾಗಿದೆ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.
ಎಸ್.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಎಸ್.ಎಂ.ಕೃಷ್ಣ ಅವರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…