ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಎಸ್.ಎಂ.ಕೃಷ್ಣ ಅವರು ಶಾಸಕ, ಸಚಿವ, ಸ್ಪೀಕರ್, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅಪಾರವಾಗಿ ಶ್ರಮಿಸಿದ್ದಾರೆ. ಅಲ್ಲದೇ ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯವಾಗಿದೆ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.
ಎಸ್.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಎಸ್.ಎಂ.ಕೃಷ್ಣ ಅವರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…