ರಾಜ್ಯ

ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಆರ್‌.ಅಶೋಕ್‌

ಬೆಂಗಳೂರು: ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು. ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದು ಹೋಗುತ್ತದೆಯೇ? ಸಿಎಂ ಸಿದ್ದರಾಮಯ್ಯ ಅವರ ಪತ್ನಿಯವರಿಗೆ 14 ನಿವೇಶನ ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಇ.ಡಿ. ವರದಿಯಲ್ಲಿ ಬಯಲಾಗಿದೆ. ಮುಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ ಎನ್ನುತ್ತಿದ್ದ ಮುಖ್ಯಮಂತ್ರಿಗಳು ಈಗ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ನಮ್ಮ ದೇಶದಲ್ಲಿ ಕಾನೂನು ಇನ್ನೂ ಗಟ್ಟಿಯಾಗಿದೆ. ತರಾತುರಿಯಲ್ಲಿ ಲೋಕಾಯುಕ್ತ ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದುಕೊಂಡು ಜನರ ಕಣ್ಣಿಗೆ ಮಣ್ಣೆರೆಚುವ ನಿಮ್ಮ ತಂತ್ರ ಫಲಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸತ್ಯಮೇವ ಜಯತೇ! ಎಂದು ಹೇಳಿದ್ದಾರೆ.

ಫೆಂಗಲ್ ಚಂಡಮಾರುತದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ 70,000 ಎಕರೆ ಪ್ರದೇಶದಲ್ಲಿ ಭತ್ತ, ರಾಗಿ ಬೆಳೆಗಳು ನೆಲಕಚ್ಚಿವೆ. ಹುಲ್ಲು ಕೊಳೆತು ಜಾನುವಾರುಗಳ ಮೇವಿಗೂ ಕೊರತೆಯಾಗಿದೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ, ನಿಮ್ಮ ಸ್ವಾಭಿಮಾನಿ, ಅಲ್ಲ ಜನಕಲ್ಯಾಣ ಸಮಾವೇಶದ ಕಿತ್ತಾಟದ ಮಧ್ಯದಲ್ಲಿ ಬಿಡುವು ಮಾಡಿಕೊಂಡು ಒಮ್ಮೆ ರಾಮನಗರ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ರೈತರ ಕಷ್ಟ ಕೇಳಿ. ಬೆಳೆ ನಷ್ಟ ಪರಿಹಾರ ಕೊಡಿಸುವ ಮೂಲಕ ಅನ್ನದಾತರ ನೆರವಿಗೆ ಬನ್ನಿ ಎಂದು ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗು ತಮ್ಮ ನಡುವೆ ಯಾವುದೇ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕನಸಿಗೆ ಮತ್ತೊಮ್ಮೆ ತಣ್ಣೀರೆರಚಿದ್ದಾರೆ. ಉಪಮುಖ್ಯಮಂತ್ರಿಗಳೇ, ತಮ್ಮ ಕನಸು ಕನಸಾಗಿಯೇ ಉಳಿಯುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ. ಈಗಲಾದರೂ ಎಚ್ಚೆತ್ತುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

1 min ago

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

25 mins ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

2 hours ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

2 hours ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

2 hours ago

ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…

2 hours ago