ರಾಜ್ಯ

ಕಾಂತರಾಜು ವರದಿ ಬಗ್ಗೆ ಜನತೆಗೆ ಅನುಮಾನ ಇದೆ, ಹಾಗಾಗಿ ಹೊಸ ವರದಿ ಪಡೆಯಲಿ: ಆರ್.‌ಅಶೋಕ್‌ ಆಗ್ರಹ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಅನುಮಾನ ಇರುವ ಕಾರಣ, ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮುಂದಾಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ (R. Ashok) ಆಗ್ರಹಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆಶೋಕ್ ಅವರು, ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ತಮ್ಮ ತಕರಾರೇನು? ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕ ಮತ್ತು ಪಾರದರ್ಶಕ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.

ಇದನ್ನು ಓದಿ:- ಕಾಂಗ್ರೇಸ್‌ ಪಕ್ಷದಿಂದ ಜನರ ಮೇಲೆ ತೆರಿಗೆ ದಾಳಿ: ಆರ್‌. ಅಶೋಕ್‌

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನು ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?. ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ತಾವು ಈ ವರದಿ ಜಾರಿ ಬಾಣ ಬಿಟ್ಟಿರುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನೆಸಿದ್ದಾರೆ.

ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ? ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಎಂದು ಕೇಳಿದರು.

ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ? ಕೇವಲ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಜನಾಂಗಕ್ಕೆ ಸೇರಿದ ಉಪಜಾತಿಗಳನ್ನು ಬೇರ್ಪಡಿಸಲಾಗಿದೆ. ಇದೇ ಮಾನದಂಡ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳಿಗೆ ಏಕೆ ಅನುಸರಿಸಿಲ್ಲ? ಇದರ ಹಿಂದಿನ ಹುನ್ನಾರ ಏನು? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

2 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

2 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

2 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

3 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

3 hours ago