Mysore
22
clear sky

Social Media

ಶನಿವಾರ, 24 ಜನವರಿ 2026
Light
Dark

ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ವಾಗ್ದಾಳಿ

r ashok

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ವಿಪಕ್ಷ ನಾಯಕ ಆರ್.‌ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂರು ಮೀಟರ್‌ ಅಂತರದಲ್ಲಿ ಎರಡು ಕಾರ್ಯಕ್ರಮ ಮಾಡುವ ಅಗತ್ಯವೇನಿತ್ತು? ಆರ್‌ಸಿಬಿ ತಂಡದ ಮಾಲೀಕರು ಕರ್ನಾಟಕದವರಲ್ಲ. ಕನ್ನಡಿಗರೂ ಅಲ್ಲ. ಹೀಗಿರುವಾಗ ಇಂತಹ ವಿಜಯೋತ್ಸವ ಮಾಡುವ ಅವಶ್ಯಕತೆ ಏನಿತ್ತು? ರಾಜಕೀಯ ಪ್ರಚಾರಕ್ಕಾಗಿ ಕಾರ್ಯಕ್ರಮ ನಡೆಸಿ ದುರಂತ ನಡೆಯಲು ಕಾರಣರಾಗಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ:- ಕಾಲ್ತುಳಿತ ಪ್ರಕರಣ ನಡೆಯಲು ಸರ್ಕಾರವೇ ಕಾರಣ: ಬಿ.ವೈ.ವಿಜಯೇಂದ್ರ

ಇನ್ನು ಮುಂದುವರಿದು ಮಾತನಾಡಿದ ಅವರು, ಆಡಗಾರರನ್ನು ವಿಧಾನಸೌಧಕ್ಕೆ ಕರೆತಂದ ಪುಣ್ಯಾತ್ಮ ಯಾರು? ಅವನ ಹೆಸರನ್ನು ಸುವರ್ಣಾಕ್ಷರದಲ್ಲಿ ಬರೆದಿಡಬೇಕಲ್ಲವೇ. ಕೋರ್ಟ್‌ ಕಟ್ಟಡದ ಮೇಲೂ ಕೂಡ ಹತ್ತಿದ್ದಾರೆ. ಇದಕ್ಕೆ ಅವಕಾಶ ಕೊಟ್ಟವರು ಯಾರು? ಈ ಘಟನೆ ನಡೆಯಲು ಸರ್ಕಾರದ ಬೇಜಾವಾಬ್ದಾರಿತನವೇ ಕಾರಣ ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!