r ashok
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂರು ಮೀಟರ್ ಅಂತರದಲ್ಲಿ ಎರಡು ಕಾರ್ಯಕ್ರಮ ಮಾಡುವ ಅಗತ್ಯವೇನಿತ್ತು? ಆರ್‌ಸಿಬಿ ತಂಡದ ಮಾಲೀಕರು ಕರ್ನಾಟಕದವರಲ್ಲ. ಕನ್ನಡಿಗರೂ ಅಲ್ಲ. ಹೀಗಿರುವಾಗ ಇಂತಹ ವಿಜಯೋತ್ಸವ ಮಾಡುವ ಅವಶ್ಯಕತೆ ಏನಿತ್ತು? ರಾಜಕೀಯ ಪ್ರಚಾರಕ್ಕಾಗಿ ಕಾರ್ಯಕ್ರಮ ನಡೆಸಿ ದುರಂತ ನಡೆಯಲು ಕಾರಣರಾಗಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ:- ಕಾಲ್ತುಳಿತ ಪ್ರಕರಣ ನಡೆಯಲು ಸರ್ಕಾರವೇ ಕಾರಣ: ಬಿ.ವೈ.ವಿಜಯೇಂದ್ರ
ಇನ್ನು ಮುಂದುವರಿದು ಮಾತನಾಡಿದ ಅವರು, ಆಡಗಾರರನ್ನು ವಿಧಾನಸೌಧಕ್ಕೆ ಕರೆತಂದ ಪುಣ್ಯಾತ್ಮ ಯಾರು? ಅವನ ಹೆಸರನ್ನು ಸುವರ್ಣಾಕ್ಷರದಲ್ಲಿ ಬರೆದಿಡಬೇಕಲ್ಲವೇ. ಕೋರ್ಟ್ ಕಟ್ಟಡದ ಮೇಲೂ ಕೂಡ ಹತ್ತಿದ್ದಾರೆ. ಇದಕ್ಕೆ ಅವಕಾಶ ಕೊಟ್ಟವರು ಯಾರು? ಈ ಘಟನೆ ನಡೆಯಲು ಸರ್ಕಾರದ ಬೇಜಾವಾಬ್ದಾರಿತನವೇ ಕಾರಣ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…