ರಾಜ್ಯ

ಸಿಎಂ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿಗಣತಿ ನಾಟಕ: ಆರ್.‌ಅಶೋಕ್‌ ಲೇವಡಿ

ಬೆಂಗಳೂರು: 10 ವರ್ಷಗಳ ಹಿಂದೆ ಆರಂಭವಾದ ಸಿಎಂ ಸಿದ್ದರಾಮಯ್ಯನವರ ಜಾತಿ ಜನಗಣತಿ ಎಂಬ ಬೃಹನ್ನಾಟಕ ಮೆಗಾ ಸೀರಿಯಲ್ ರೀತಿ ಇನ್ನೂ ಮುಂದುವರೆಯುತ್ತಲೇ ಇದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನಿಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲ ಜಾತಿ ಜನಗಣತಿಯ ಕಾರ್ಡ್ ಬಳಸಿ ಪರಿಶಿಷ್ಟ ಸಮುದಾಯಗಳಿಗೆ, ಹಿಂದುಳಿದ ವರ್ಗಗಳಿಗೆ ಯಾಕೆ ಅಪಮಾನ ಮಾಡುತ್ತೀರಿ ಮುಖ್ಯಮಂತ್ರಿಗಳೇ?

ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ. ಸಾಕು ಮಾಡಿ ನಿಮ್ಮ ನಾಟಕ.

ದಶವಾರ್ಷಿಕ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿಯನ್ನೂ ಸೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಈಗಾಗಲೇ ನಿರ್ಧಾರ ಮಾಡಿದೆ. ಈಗ ಮತ್ತೊಮ್ಮೆ ಕನ್ನಡಿಗರ ಬೆವರಿನ ತೆರಿಗೆ ಹಣವನ್ನು ವಿನಾಕಾರಣ ದುಂದುವೆಚ್ಚ ಮಾಡಿ ಅಪವ್ಯಯ ಮಾಡಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

4 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

5 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

24 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago