ರಾಜ್ಯ

ಕಾಂಗ್ರೆಸ್‌ ಪಕ್ಷ ಗೂಂಡಾಗಿರಿ ಮಾಡುತ್ತಿದೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಕಾಂಗ್ರೆಸ್‌ ಗೂಂಡಾಗಳು ದಾಳಿ ಮಾಡಿದ್ದಾರೆ. ಸರ್ಕಾರ ಮಾಡಿರುವ ತಪ್ಪುಗಳ ವಿರುದ್ಧ ನಾರಾಯಣಸ್ವಾಮಿ ಮಾತಾಡಿದ್ದಾರೆ. ಆದರೆ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಲಾಗಿದೆ. ಇದೇ ರೀತಿ ಸಿ.ಟಿ.ರವಿ ಅವರ ಮೇಲೂ ದಾಳಿ ಮಾಡಲಾಗಿತ್ತು. ಪೊಲೀಸರು ನಾರಾಯಣಸ್ವಾಮಿ ಅವರಿಗೆ ರಕ್ಷಣೆ ನೀಡಿಲ್ಲ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಟ್ಟಿಲ್ಲ ಎಂದು ದೂರಿದರು.

ನಾರಾಯಣಸ್ವಾಮಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಕಾರಿನ ಮೇಲೆ ಬಣ್ಣ, ಮೊಟ್ಟೆ ಹಾಕಲಾಗಿದೆ. ಕೊಲೆ ಬೆದರಿಕೆ ಹಾಕಲಾಗಿದೆ. ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು ಪ್ರತಿಪಕ್ಷ ನಾಯಕರ ಕರ್ತವ್ಯ. ಅದನ್ನು ಅವರು ಸರಿಯಾಗಿಯೇ ಮಾಡಿದ್ದಾರೆ. ನಾಯಿ ಬೊಗಳಿದರೆ ಸ್ವರ್ಗ ಹಾಳಾಗಲ್ಲ ಎಂಬುದು ಗಾದೆ ಮಾತು ಅಷ್ಟೆ. ಕಲಬುರ್ಗಿಯಲ್ಲಿ ಇದು ಹೊಸದಲ್ಲ. ಇದು ಪ್ರತಿ ದಿನದ ಕಾಯಕವಾಗಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಇದರ ಹಿಂದೆ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಾನೂನು ಕೈಗೆ ತೆಗೆದುಕೊಳ್ಳುವ ಅಧಿಕಾರವನ್ನು ಯಾರು ನೀಡಿದ್ದಾರೆ? ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಗೂಂಡಾಗಿರಿ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ನಾರಾಯಣಸ್ವಾಮಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು. ಪೊಲೀಸರು ಹಾಗೂ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್‌ ಕಾಮೆಂಟ್‌ : ಸಾನ್ವಿ ಸುದೀಪ್‌ ಖಡಕ್‌ ತಿರುಗೇಟು

ಬೆಂಗಳೂರು : ನಟ ಕಿಚ್ಚ ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…

21 mins ago

ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…

35 mins ago

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…

1 hour ago

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

2 hours ago

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

2 hours ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

3 hours ago