ಬೆಂಗಳೂರು: ಭಾರತೀಯ ಸೇನೆ 100ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು. ಯುದ್ಧಕ್ಕೆ ಮುನ್ನ ಶಾಂತಿಯ ಮಾತು ಆಡುತ್ತಾರೆ, ಕದನ ವಿರಾಮವಾದಾಗ ಯುದ್ಧ ನಿಲ್ಲಿಸಿದ್ದೇಕೆ ಎಂದು ಪ್ರಶ್ನಿಸುತ್ತಾರೆ. ಜೊತೆಗೆ ಅಧಿವೇಶನ ನಡೆಸಬೇಕೆಂದು ಕೇಳುತ್ತಾರೆ. ಆದರೆ ಇದು ಅಧಿವೇಶನ ನಡೆಸುವ ಸಮಯವಲ್ಲ. ನಮ್ಮ ಯೋಧರು ಸಾಕ್ಷಿ ನೀಡಿದ್ದಾರೆ. ಇನ್ನು ಮುಂದೆ ಯಾರೂ ಸಾಕ್ಷಿ ಕೇಳಬಾರದು. ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಬಗ್ಗೆ, ಸಿಂಧೂ ನದಿ ಒಪ್ಪಂದದ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್‌ನವರು ರಾಜಕಾರಣ ಮಾಡುವುದನ್ನು ಬಿಟ್ಟು ಯೋಧರಿಗೆ ಬೆಂಬಲ ನೀಡಬೇಕು. ಈ ಹಿಂದೆ ಪಿಒಕೆ ಬಿಟ್ಟುಕೊಟ್ಟಿದ್ದು, ಮುಂಬೈ ದಾಳಿ ಮೊದಲಾದವುಗಳ ಬಗ್ಗೆ ನಾವೇನೂ ಪ್ರಶ್ನೆ ಮಾಡುತ್ತಿಲ್ಲ. ಈ ಘಟನೆಗೆ ಇಂದಿರಾಗಾಂಧಿಯವರ ಹೋಲಿಕೆ ಮಾಡುವ ಅಗತ್ಯವಿಲ್ಲ. ಬಾಂಗ್ಲಾದೇಶದ ರಚನೆಯಾಯಿತು ಎನ್ನುವುದಾದರೆ, ಪಿಒಕೆ ಯಾಕೆ ಬಿಟ್ಟಿದ್ದೀರಿ ಎಂಬ ಪ್ರಶ್ನೆ ಬರುತ್ತದೆ. ಆದರೆ ಇದರ ಬಗ್ಗೆ ನಾವ್ಯಾರೂ ಮಾತಾಡುತ್ತಿಲ್ಲ. ಇಂತಹ ಮಾತನಾಡಲು ಇದು ಸಮಯ ಅಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಿಂದಲೂ ಯುದ್ಧ ಬೇಡ ಎಂದರು. ಕಾಂಗ್ರೆಸ್ ಪಕ್ಷ ಶಾಂತಿ ಎಂದು ಟ್ವೀಟ್ ಮಾಡಿತ್ತು. ಈ ನಡುವೆ ಸಚಿವ ಕೃಷ್ಣ ಭೈರೇಗೌಡ ಉಲ್ಟಾ ಮಾತಾಡುತ್ತಿದ್ದಾರೆ. ಇಲ್ಲಿ ನಾವು ಏನೇ ಮಾತಾಡಿದರೂ ಭಾರತೀಯ ಸೇನೆಯ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಕದನ ವಿರಾಮ ಕೂಡ ಸೇನಾಧಿಕಾರಿಗಳು ಕೈಗೊಂಡ ತೀರ್ಮಾನವಾಗಿದೆ. ಕದನ ವಿರಾಮಕ್ಕೆ ಯಾರದ್ದೇ ಮಧ್ಯಸ್ಥಿಕೆ ಇರಲಿಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ. ಯಾರದ್ದೇ ಮಧ್ಯಸ್ಥಿಕೆಯನ್ನು ಭಾರತ ಒಪ್ಪಲ್ಲ ಎಂದರು
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…