ನವದೆಹಲಿ: ಕರ್ನಾಟಕ ರಾಜ್ಯ ಅವಮಾನ ಪಡುವಂತಹ ಹೇಳಿಕೆಯನ್ನು ಶಾಸಕ ಸಂಗಮೇಶ್ ಕೊಟ್ಟಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಮುಲ್ಲಾಗಳ ಸರ್ಕಾರ ಅನ್ನೋದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಮುಂದಿನ ಜನ್ಮ ಅಂತಿದ್ರೆ ಮುಸ್ಲಿಂ ಆಗಿಯೇ ಹುಟ್ಟಬೇಕು ಎಂಬ ಶಾಸಕ ಸಂಗಮೇಶ್ ಹೇಳಿಕೆ ಕುರಿತು ದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಗಮೇಶ್ ಹೇಳಿಕೆ ನೋಡಿದರೆ ಕಾಂಗ್ರೆಸ್‌ನ ಎಲ್ಲಾ ಶಾಸಕರು ಮುಸ್ಲಿಮರು ಆಗಬೇಕು ಎಂದು ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದ್ದಾರಾ? ಇದೊಂದು ಮತಾಂತರ ಮಾಡುವ ಕೆಲಸ ಅನ್ನಿಸುತ್ತದೆ. ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ಈ ರೀತಿ ಹೇಳಿಕೊಡುತ್ತಿದ್ದಾರೆ. ಸಂಗಮೇಶ್ ಹೇಳಿಕೆ ಇಡೀ ಕಾಂಗ್ರೆಸ್ ಹೇಳಿಕೆ ಆಗಿದೆ. ಕರ್ನಾಟಕ ಸರ್ಕಾರ ಸತ್ತು ಹೋಗಿದೆ ಎಂದು ಕಿಡಿಕಾರಿದರು.





