ರಾಜ್ಯ

ಸಿದ್ದರಾಮಯ್ಯಗೆ outgoing cm ಎಂದ ಆರ್‌.ಅಶೋಕ್‌

ಬೆಂಗಳೂರು: ಅಧಿಕಾರಿಗಳನ್ನು ತರಾಟೆ ತೆಗೆದುಕೊಳ್ಳುವ ಮೊದಲು ನಿಮ್ಮ ಸಚಿವ ಸಂಪುಟ ಸಚಿವರಿಗೆ ನಿಮ್ಮ ಮಾತು, ಆದೇಶ ಪಾಲನೆ ಮಾಡುವಂತೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿ. ಕೆಲಸ ಮಾಡದ ಸೋಮಾರಿ ಸಚಿವರನ್ನು ಸಂಪುಟದಿಂದ ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ ಎಂದು ಪ್ರತಿಪಕ್ಷ ನಾಯಕ ಆರ್ ಆಶೋಕ್, ಸಿಎಂ ಸಿದ್ದರಾಮಯ್ಯರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಡಿಸಿ, ಸಿಇಒಗಳ ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ಸುದ್ದಿ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ಯಂತ್ರ ಹೇಗೆ ಸಂಪೂರ್ಣವಾಗಿ ಹಳಿ ತಪ್ಪಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇಷ್ಟಕ್ಕೂ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂಬ ನಿಮ್ಮ ಬೇಡಿಕೆಗೆ ಹೈಕಮಾಂಡ್ ಯಾಕೆ ಸೊಪ್ಪು ಹಾಕುತ್ತಿಲ್ಲ? ಇದು ತಾವು ನಿರ್ಗಮಿತ ಸಿಎಂ ಎಂಬುದಕ್ಕೆ ಪರೋಕ್ಷ ಸೂಚನೆಯೋ? ಅಥವಾ ಹೇಗಿದ್ದರೂ ಮುಖ್ಯಮಂತ್ರಿ ಬದಲಾವಣೆ ಆಗಲಿದೆ, ಈಗ ಸಂಪುಟ ವಿಸ್ತರಣೆ/ಪುನರ್‌ರಚನೆ ಯಾಕೆ ಎಂದು ಸುಮ್ಮನಿದ್ದಾರೋ? ಎಂದು ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ಬಡವನ ಕೋಪ ದವಡೆಗೆ ಮೂಲ ಎನ್ನುವಂತೆ ತಮ್ಮ ಕೋಪ-ತಾಪ, ರೋಷಾವೇಷ ಅಧಿಕಾರಿಗಳ ಮೇಲಲ್ಲ, ಸಚಿವ ಸಂಪುಟದ ಸದಸ್ಯರ ಮೇಲೆ ತೋರಿಸಿ. ನಿಮ್ಮ ಹತಾಶೆಯನ್ನು, ಅಸಹಾಯಕತೆಯನ್ನ ಅಧಿಕಾರಿಗಳ ಮೇಲಲ್ಲಾ, ತಮ್ಮ ಮಾತಿಗೆ ನಯಾ ಪೈಸೆ ಬೆಲೆ ಕೊಡದ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕ್ಲಾಸ್ ತೆಗೆದುಕೊಂಡು ನಿಮ್ಮ ದಮ್ಮು ತಾಕತ್ತು ತೋರಿಸಿ ಎಂದು ಸವಾಲು ಎಸೆದಿದ್ದಾರೆ.

ಮನೆಯ ಯಜಮಾನ ಸರಿ ಇಲ್ಲದೆ ಹೋದರೆ ಹೇಗೆ ಸಂಸಾರ ಬೀದಿಗೆ ಬರುತ್ತದೋ ಅದೇ ರೀತಿ ಒಂದು ಸರ್ಕಾರದಲ್ಲಿ ಮುಖ್ಯಮಂತ್ರಿಗೆ ಹಿಡಿತ ಇಲ್ಲದೆ ಹೋದರೆ ಆಡಳಿತ ಯಂತ್ರ ಹಳ್ಳ ಹಿಡಿಯುತ್ತದೆ. ಮುಖ್ಯಮಂತ್ರಿ ಮಾತಿಗೆ ಸಚಿವರೇ ಕಿಮ್ಮತ್ತು ಕೊಡುತ್ತಿಲ್ಲ ಎಂದರೆ ಆಡಳಿತಶಾಹಿಯಲ್ಲಿ ಗೊಂದಲ ಮೂಡಿಸುತ್ತದೆ ಎಂದು ಟೀಕಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

55 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

1 hour ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

2 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

3 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago