ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡೋದು ಬೇಡ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಪಾಕಿಸ್ತಾನ ರತ್ನ” ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ.
ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರು ರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ ಎಂದು ಕಿಡಿಕಾರಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…