ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ ಗುಪ್ತಚರ ಇಲಾಖೆ ವೈಫಲ್ಯ ಕಾರಣ ಎಂಬ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂತೋಷ್ ಲಾಡ್ ಇನ್ನಷ್ಟು ಪ್ರಬುದ್ಧತೆ ಬೆಳೆಸಿಕೊಳ್ಳಬೇಕು. ಕಾಂಗ್ರೆಸ್‌ನವರು ಸೇನೆಯ ಮೇಲೆ ಅನುಮಾನ ಪಡುತ್ತಿದ್ದಾರೆ. ಅನುಮಾನ ಪಡುವುದು ಒಳ್ಳೆಯದಲ್ಲ. ಕಾಶ್ಮೀರದಲ್ಲಿ ಯೋಧರು ಜೀವದ ಹಂಗು ತೊರೆದು ಹೋರಾಟ ಮಾಡುತ್ತಿದ್ದಾರೆ. ಸೇನೆ ಇರುವುದರಿಂದಲೇ ಸಂತೋಷ್ ಲಾಡ್ ಇಲ್ಲಿ ಸಂತೋಷವಾಗಿದ್ದಾರೆ. ದೇಶಕ್ಕೆ ಸಂಕಷ್ಟ ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂದು ಕಾಂಗ್ರೆಸ್‌ನವರು ಕಲಿಯಲಿ ಎಂದು ವಾಗ್ದಾಳಿ ನಡೆಸಿದರು.
ಇನ್ನು ನಾನು ಯುದ್ಧದ ಪರ ಅಲ್ಲ. ಶಾಂತಿಯ ಪರ ಎಂಬ ಸಿಎಂ ಸಿದ್ದು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಹೇಳಿಕೆಯಿಂದ ಗುಂಡಿನ ದಾಳಿಯಲ್ಲಿ ಮೃತಪಟ್ಟವರಿಗೆ ಅವಮಾನ ಮಾಡಿದಂತೆ. ಕೂಡಲೇ ಸಿಎಂ ಸಿದ್ದರಾಮಯ್ಯ ಜನರ ಮುಂದೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.