ರಾಜ್ಯ

ಸಿಎಂ ವಿರುದ್ಧದ ತನಿಖೆ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಆರ್‌.ಅಶೋಕ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿಂದು (ಆಗಸ್ಟ್‌ 17) ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು. ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್‌, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಇಷ್ಟೆಲ್ಲ ಆಗಿರುವಾಗ ಇದು ದೊಡ್ಡ ಹಗರಣ ಎಂಬುದು ಸಾಬೀತಾಗಿದೆ ಎಂದರು.

ಕಾಂಗ್ರೆಸ್‌ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್‌ ಪಡೆಯಬೇಕೆಂಬುದು ನಮ್ಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕೆಂದು ನಮ್ಮ ಆಗ್ರಹ ಎಂದು ತಿಳಿಸಿದರು.

ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್‌ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ. ರಾಜ್ಯಪಾಲರು ಸರ್ಕಾರದ ಭಾಗ. ಅವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿದರೆ ಅವರು ಸಂವಿಧಾನಕ್ಕೆ ತೋರುವ ಅಗೌರವ ಎಂದರು.

ಕಾಂಗ್ರೆಸ್‌ ಅಭಿವೃದ್ಧಿ ಮಾಡದೆ ಹೈಕಮಾಂಡ್‌ಗೆ ಎಟಿಎಂ ಆಗಿ ಕೆಲಸ ಮಾಡುತ್ತಿದೆ. ತುಂಗಭದ್ರಾ ಜಲಾಶಯದ ಗೇಟ್‌ ದುರಸ್ತಿ ಮಾಡಲು ಕೂಡ ಸರ್ಕಾರದ ಬಳಿ ಹಣವಿಲ್ಲ ಎಂದು ದೂರಿದರು.

ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಶಾಸಕರೇ ತಿರುಗಿಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಸ್ಪಷ್ಟಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

3 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

3 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

3 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

4 hours ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

4 hours ago