ರಾಜ್ಯ

ಅಬಕಾರಿ ಇಲಾಖೆ| ವರ್ಗಾವಣೆಗೆ ಹೊಸ ನಿಯಮ ಜಾರಿ: ಆರ್‌.ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆ ತರುವ ಹಿನ್ನೆಲೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡು ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ನಿಯಮಗಳನ್ನು ಮಾರ್ಪಾಡುವ ಮಾಡುವ ಸಲುವಾಗಿ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ಧತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದರು.

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ(ಜ.16) ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು-2025 ಅನುಮೋದನೆ ನೀಡಲಾಗಿದೆ. ಈ ನಿಯಮಗಳ ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸಲಾಗುವುದು. ಅಲ್ಲದೇ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮ- 2025 ಅನ್ನು ಅಂತಿಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು.

ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಹಾಗೂ ಕಾರ್ಯ ನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ‌ ಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ತೀರ್ಮಾನಿಸಲಾಗಿದೆ. ಒಂದು ಅಧಿಕಾರಿ ಅಥವಾ ಸಿಬ್ಬಂದಿಯನ್ನು ನಿರತಂತರವಾಗಿ ಎರಡಕ್ಕಿಂತ ಅಧಿಕ ಅವಧಿಗೆ ಕಾರ್ಯ ನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ. ಇನ್ನೂ ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು.

ಈ ಇಲಾಖೆಯೂ ಸಮವಸ್ತ್ರಾಧಾರಿತ ಹಾಗೂ ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮಗಳು ಇಲಾಖೆಯಲ್ಲಿನ ಜಾರಿಗೆ ಹಾಗೂ ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ. ಅಲ್ಲದೇ ಇಲಾಖೆಯಲ್ಲಿ ಪಾರದರ್ಶಕತೆ ವ್ಯವಸ್ಥೆ ಜಾರಿಯಾಗುವುದರಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗುತ್ತದೆ. ಜೊತೆಗೆ ಸರ್ಕಾರಕ್ಕೆ ಆದಾಯ ಸಹ ಅಧಿಕವಾಗಲಿದೆ ಎಂದರು.

ಇನ್ನೂ ಕಳೆದ ಐದು ವರ್ಷಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸಲು ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

6 mins ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

29 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

60 mins ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

1 hour ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

2 hours ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

3 hours ago