ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶದ ಕರಾವಳಿಯ ಮಧ್ಯಭಾಗಗಳು ಸೇರಿದಂತೆ ವಿವಿಧೆಡೆ ಚಂಡಮಾರುತ ಪರಿಚಲನೆ ಏರ್ಪಟ್ಟಿರುವುದರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಚಿಕ್ಕಮಗಳೂರು, ಕೊಡಗು, ಕೋಲಾರ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಯಾದಗಿರಿ, ಧಾರವಾಡ ಹಾಗೂ ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಜಮೀನುಗಳಲ್ಲಿ ಕೆಲಸ ಮಾಡುವ ರೈತರು ಎಚ್ಚರಿಕೆಯಿಂದ ಇರಬೇಕು. ಸಿಡಿಲು ಸಹಿತ ಭಾರೀ ಮಳೆಯಾಗುವ ಪರಿಣಾಮ ಯಾವುದೇ ಕಾರಣಕ್ಕೂ ಮರದ ಕೆಳಗಡೆ ನಿಲ್ಲಬಾರದು ಎಂದು ಸೂಚನೆ ನೀಡಲಾಗಿದೆ.
ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…
ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…
ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…