ರಾಜ್ಯ

ಕೃಷ್ಣ ನದಿಯಲ್ಲಿ ತೆಪ್ಪ ಮುಗುಚಿ 6 ಮಂದಿ ನೀರುಪಾಲು

ವಿಜಯಪುರ: ಇಸ್ಪೀಟ್‌ ಆಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ಇಂದು(ಜು.2) ಸಂಜೆ ದಾಳಿ ನಡೆಸಿದ್ದು, ದಾಳೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಪಕ್ಕದಲ್ಲಿದ್ದ ನದಿಯಲ್ಲಿ ತೆಪ್ಪ ಏರಿ ಹೊರಟ 6 ಮಂದಿ ನೀರುಪಾಲಾದ ಘಟನೆ ಕೃಷ್ಣ ನದಿ ತೀರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ನಿವಾಸಿಗಳಾದ ಮಹಿಬಾಬ್‌ ವಾಲಿಕಾರ(30) ತಯ್ಯಬ್‌ ಚೌಧರಿ(42) ರಫೀಕ್‌ ಜಾಲಗಾರ(55) ಪುಂಡಲೀಕ ಮಲ್ಲಪ್ಪ ಯಂಕಂಚಿ(36) ಧಶರಥ ಗೌಡ(66) ನೀರುಪಾಲಾಗಿ ಸಾವಿಗೀಡಾದವರು. ಸಾವಿಗೀಡಾದ ಇನ್ನೊಬ್ಬರ ಹೆಸರು ತಿಳಿದುಬಂದಿಲ್ಲ. ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಾಹಾಯದೊಂದಿಗೆ ಶವಗಳ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ವಿಷಯ ತಿಳಿದು ಎಸ್ಪಿ ಹಾಗೂ ಎಎಸ್‌ಪಿ ಸ್ಥಳಕ್ಕೆ ದೌಡಯಿಲಿ ಪರಿಶೀಲನೆ ನಡೆಸಿದ್ದಾರೆ.

ಆರೇಳು ಮಂದಿ ಗುಂಪೊಂದು ಕೃಷ್ಣ ನದಿ ತೀರದಲ್ಲಿ ಇಸ್ಪೀಟ್‌ ಆಡುತ್ತಿರುವ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳು ಆರೋಪಿಗಳು ಪಕ್ಕದಲ್ಲಿದ್ದ ತೆಪ್ಪ ಏರಿದ್ದಾರೆ. ಆದರೆ, ನದಿಯಲ್ಲಿ ಸ್ಪಲ್ಪ ದೂರ ಹೋಗುತ್ತಿದ್ದಂತೆ ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿ ಬಿದ್ದಿದೆ. ಪರಿಣಾಮ ಆರು ಜನರು ಜಲಸಮಾಧಿಯಾಗಿದ್ದು, ಇನ್ನಿಬ್ಬರು ಈಜಿಕೊಂಡು ದಡ ಸೇರಿದ್ದಾರೆ.

ಒಟ್ಟಿನಲ್ಲಿ ಇಸ್ಪೀಟ್‌ ಆಡಲು ಹೋದವರು ದುರಂತ ಅಂತ್ಯ ಕಂಡಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

3 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

8 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

8 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

8 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

8 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

8 hours ago