ರಾಜ್ಯ

ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶಕ್ಕೆ ರಾಹುಲ್‌ ಗಾಂಧಿ ಗೈರು: ಆರ್.‌ಅಶೋಕ್‌ ಹೇಳಿದ್ದಿಷ್ಟು

ಬೆಂಗಳೂರು: ಕರ್ನಾಟಕಕ್ಕೆ ಬರಲು ರಾಹುಲ್‌ ಗಾಂಧಿ ಮುಜುಗರ ಪಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಲೇವಡಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಗೈರಾಗಿದ್ದಾರೆ.

ಈ ಬಗ್ಗೆ ಲೇವಡಿ ಮಾಡಿರುವ ಆರ್.‌ಅಶೋಕ್‌ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸತತ ಮೂರನೇ ಸಲವೂ ಶೂನ್ಯ ಸಾಧನೆ ಮಾಡಿ ಅವಮಾನಗೊಂಡಿರುವುದಕ್ಕೆ ರಾಹುಲ್‌ ಗಾಂಧಿ ಅವರು ಕರ್ನಾಟಕಕ್ಕೆ ಬರಲು ಮುಜುಗರ ಪಡುತ್ತಿದ್ದಾರೆಯೇ? ಅಥವಾ ಕಾಂಗ್ರೆಸ್‌ ಪಕ್ಷದಲ್ಲಿ ನಡೆಯುತ್ತಿರುವ ಗುಂಪುಗಾರಿಕೆಯನ್ನು ಎದುರಿಸಲು ರಾಹುಲ್‌ ಹೆದರುತ್ತಿದ್ದಾರೆಯೇ ಎಂದು ಲೇವಡಿ ಮಾಡಿದ್ದಾರೆ.

ಡಿಸಿಎಂ ಡಿಕೆಶಿ ಅವರಿಗಿಂತ ಗಾಂಧಿ ಕುಟುಂಬದವರು ಯಾವಾಗಲೂ ಸಿಎಂ ಸಿದ್ದರಾಮಯ್ಯ ಅವರತ್ತ ಒಲವು ತೋರಿದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಅದು ಎಲ್ಲರಿಗೂ ತಿಳಿದಿದೆ. ರಾಹುಲ್‌ ಗಾಂಧಿ ಹಾಗೂ ಡಿಕೆಶಿ ಒಬ್ಬರನ್ನೊಬ್ಬರು ನೋಡುತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

2 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

3 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

4 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

9 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

16 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

16 hours ago