ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಎನ್‌ಡಿಎ ಪಕ್ಷ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಹಿಡಿಯಲು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ.
ಇತ್ತ ರಾಜ್ಯದಲ್ಲಿ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಸ್ಥಾನಗಳು ಬಂದ ಹಿನ್ನೆಲೆ ಚುನಾವಣೆ ಹಾಗೂ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ಪ್ರಮುಖ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಭಾಗವಹಿಸಿದ್ದರು.
ಇನ್ನು ಈ ಸಭೆಯಲ್ಲಿ ಮಾತನಾಡಿರುವ ರಾಹುಲ್ ಗಾಂಧಿ, ಚುನಾವಣೆಯಲ್ಲಿ ಕಡಿಮೆ ಮತದಾನ ಬಂದಿರುವುದಕ್ಕೆ, ಕಡಿಮೆ ಸ್ಥಾನಗಳನ್ನು ಗೆದ್ದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೀವು ಕೇಳಿದವರಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ನೀಡಿದ್ದೇವೆ. ನಿಮ್ಮ ಜವಾಬ್ದಾರಿ ನಿರ್ವಹಿಸುವಲ್ಲಿ ನೀವು ಸೋತಿದ್ದೀರಿ. ವಿಫಲರಾದವರ ವಿರುದ್ಧ ತೆಗೆದುಕೊಳ್ಳಬೇಕಿರುವ ಮುಂದಿನ ನಿರ್ಧಾರಗಳೇನು. ಮುಂದಿನ ದಿನಗಳಲ್ಲಿ ಹೀಗಾಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ವಾಲ್ಮೀಕಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ, ಪಕ್ಷದ ಸಚಿರ ಘನತೆಗೆ ಧಕ್ಕೆ ಬಾರದ ಹಾಗೆ ನೋಡಿಕೊಳ್ಳಬೇಕು. ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆಲಸ ಮಾಡಬಾರದು ಎಂದು ವಾರ್ನಿಂಗ್ ನೀಡಿದ್ದಾರೆ ಎಂದು ಹೇಳಲಾಗಿದೆ.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…