ರಾಜ್ಯ

ಬೆಂಗಳೂರಿಗೆ ಬಂದು ಸಚಿವರಿಗೆ ಖಡಕ್‌ ಎಚ್ಚರಿಕೆ ಕೊಟ್ಟ ರಾಗಾ

ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಎನ್‌ಡಿಎ ಪಕ್ಷ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಹಿಡಿಯಲು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ.

ಇತ್ತ ರಾಜ್ಯದಲ್ಲಿ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಸ್ಥಾನಗಳು ಬಂದ ಹಿನ್ನೆಲೆ ಚುನಾವಣೆ ಹಾಗೂ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸಹಿತ ಪ್ರಮುಖ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಭಾಗವಹಿಸಿದ್ದರು.

ಇನ್ನು ಈ ಸಭೆಯಲ್ಲಿ ಮಾತನಾಡಿರುವ ರಾಹುಲ್‌ ಗಾಂಧಿ, ಚುನಾವಣೆಯಲ್ಲಿ ಕಡಿಮೆ ಮತದಾನ ಬಂದಿರುವುದಕ್ಕೆ, ಕಡಿಮೆ ಸ್ಥಾನಗಳನ್ನು ಗೆದ್ದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೀವು ಕೇಳಿದವರಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್‌ ನೀಡಿದ್ದೇವೆ. ನಿಮ್ಮ ಜವಾಬ್ದಾರಿ ನಿರ್ವಹಿಸುವಲ್ಲಿ ನೀವು ಸೋತಿದ್ದೀರಿ. ವಿಫಲರಾದವರ ವಿರುದ್ಧ ತೆಗೆದುಕೊಳ್ಳಬೇಕಿರುವ ಮುಂದಿನ ನಿರ್ಧಾರಗಳೇನು. ಮುಂದಿನ ದಿನಗಳಲ್ಲಿ ಹೀಗಾಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ವಾಲ್ಮೀಕಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ, ಪಕ್ಷದ ಸಚಿರ ಘನತೆಗೆ ಧಕ್ಕೆ ಬಾರದ ಹಾಗೆ ನೋಡಿಕೊಳ್ಳಬೇಕು. ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆಲಸ ಮಾಡಬಾರದು ಎಂದು ವಾರ್ನಿಂಗ್‌ ನೀಡಿದ್ದಾರೆ ಎಂದು ಹೇಳಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

1 hour ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

2 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

2 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

3 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

6 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

11 hours ago