ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುರಾರಚನೆ ಆಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.
ಇದಕ್ಕೆ ಪುಷ್ಠಿ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜ್ಯ ಸಚಿವ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರಿಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಈ ವೇಳೆ ರಾಹುಲ್ ಗಾಂಧಿ ಸಚಿವ ಸಂಪುಟ ಪುನಾರಚನೆಗೆ ಒಪ್ಪಿಗೆ ನೀಡಿದ್ದಾರೆ. ಸಂಪುಟ ಪುನಾರಚನೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಎಂದು ಹೇಳಿದ್ದಾರೆ ಎನ್ನಲಾಗಿದೆ.





