by vijayendra
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆಗಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಕ್ರಮದ ಬಗ್ಗೆ ಪುರಾವೆ ಇದ್ದಿದ್ದರೆ ಕೋರ್ಟ್‌ಗೆ ಹೋಗಿ ಪ್ರಶ್ನೆ ಮಾಡಬಹುದಿತ್ತು. ಆದರೆ ರಾಹುಲ್ ಗಾಂಧಿ ಈಗ ಕಪಟ ನಾಟಕ ಆರಂಭ ಮಾಡಿದ್ದಾರೆ. ಪ್ರಧಾನಿ ಮೋದಿಯವರ ವರ್ಚಸ್ಸು ಸಹಿಸಲು ಆಗುತ್ತಿಲ್ಲ. ತುರ್ತು ಪರಿಸ್ಥಿತಿ ಸೃಷ್ಟಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಆಗಸ್ಟ್.5ರಂದು ರಾಹುಲ್ ಗಾಂಧಿ ಡ್ರಾಮಾ ಮಾಡುತ್ತಾರೆ. ರಾಹುಲ್ ಗಾಂಧಿ ಬರುತ್ತಾರೆ ಎಂದು ಮರ ಕಡಿದರೂ ಪಾರ್ಕ್ ಕಾಂಪೌಂಡ್ ಒಡೆದಿದ್ದಾರೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ರಾಜ್ಯದ ಜನರೆದುರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…