ರಾಜ್ಯ

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಎಂದ ರಾಹುಲ್‌ ಗಾಂಧಿ!

ಕೋಲಾರ: ಲೋಕಸಭಾ ಚುನಾವಣೆ ಹಿನ್ನಲೆ ಕರ್ನಾಟಕದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅರಿವಿಗೆ ಬಾರದಂತೆ ಆಡಿದ ಮಾತು ಇದೀಗ ಭಾರೀ ಚರ್ಚೆಗೆ ಗುರಿಯಾಗಿದೆ.

ಕೋಲಾರದ ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗೇಟ್‌ ಬಳಿ ಬೃಹತ್‌ ಕಾಂಗ್ರೆಸ್‌ ಸಮಾವೇಶದಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ರಾಹುಲ್‌ ಗಾಂಧಿ ಕರ್ನಾಟಕ ಜನತೆಗೆ ನಮಸ್ಕಾರ ಎಂದು ಮಾತು ಮುಂದುವರೆಸಿದರು. ಬಳಿಕ ಕಾಂಗ್ರೆಸ್‌ ಪ್ರಬಲ ನಾಯಕರನ್ನು ಹುದ್ದೆಗಳನ್ನೇ ಬದಲಿಸಿ ಸಂಭೋದಿಸಿದರು.

ಖರ್ಗೆ ಜೀ, ಕಾಂಗ್ರೆಸ್‌ ಅಧ್ಯಕ್ಷ ಸಿದ್ದರಾಮಯ್ಯ ಜೀ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಜೀ, ಕೆ ಹೆಚ್‌ ಮುನಿಯಪ್ಪ ಜೀ ಎಂದು ಭಾಷಣ ಆರಂಭಿಸಿದರು. ಇದು ಬಿಜೆಪಿ ಜೆಡಿಎಸ್‌ ಮತ್ತು ಟ್ರೋಲರ್ಸ್‌ ಗಳಿಗೆ ದೊಡ್ಡ ಆಹಾರವಾಗಿ ಪರಿಣಮಿಸಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

1 hour ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

1 hour ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

2 hours ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

3 hours ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

14 hours ago