ರಾಜ್ಯ

ಹಿಂದುಗಳ ಅವಹೇಳನ: ರಾಹುಲ್‌ ಗಾಂಧಿ ಕ್ಷಮೆಗೆ ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ಹಿಂದುಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಹಿಂದುಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ರಾಹುಲ್‌ ಗಾಂಧಿ ಲೋಕಸಭಾ ಚುನಾವಣೆ ವೇಳೆಯೂ ಸುಳ್ಳನ್ನೇ ಹತ್ತಾರು ಬಾರಿ ಹೇಳಿಕೊಂಡು ದೇಶಾದ್ಯಂತ ಪ್ರವಾಸ ಮಾಡಿದ್ದರು.

ಈಗ ವಿಪಕ್ಷ ನಾಯಕನಾಗಿ ಹಳೇ ಚಾಳಿ ಮುಂದುವರಿಸಿದ್ದು, ಸಂಸದರಾದ ಅವರು ತಮ್ಮ ಸ್ಥಾನದ ಘನತೆ ಎತ್ತಿ ಹಿಡಿಯುವ ಬದಲಾಗಿ ಆ ಸ್ಥಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

ರಾಹುಲ್‌ ಗಾಂಧಿ ತಮ್ಮ ಭಾಷಣದಲ್ಲಿ ಹಿಂದುಗಳು ಹಿಂಸಾಚಾರ ಮತ್ತು ದ್ವೇಷದಲ್ಲಿ ಹಗಲಿರುಳು ನಿರತರು ಎಂಬ ಮಾತನ್ನು ಉಲ್ಲೇಖಿಸಿದ್ದಾರೆ. ಈ ಮಾತನ್ನು ಹೇಳುವ ಮೂಲಕ ಅವರು ಈ ದೇಶದ ಅಸಂಖ್ಯಾತ ಹಿಂದುಗಳಿಗೆ ಅವಮಾನ ಮಾಡಿದ್ದಾರೆ. ಈ ಮೂಲಕ ಹಿಂದುಗಳ ತೇಜೋವಧೆ ಮಾಡಿದ್ದಾರೆ. ಅಷ್ಟೇ ಸಾಲದೆಂದು ಅಗ್ನಿವೀರ್‌, ರೈತರ ಬಗ್ಗೆ, ಅಯೋಧ್ಯೆ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಇವೆಲ್ಲಾ ವಿಚಾರಗಳಲ್ಲಿ ಸುಳ್ಳು ಹೇಳಿಕೆ ನೀಡಿದ್ದಲ್ಲದೇ, ಹಿಂದುಗಳ ತೇಜೋವಧೆ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು.

ಈ ಎಲ್ಲಾ ಮಾತುಗಳನ್ನು ಆಡಿರುವ ರಾಹುಲ್‌ ಗಾಂಧಿ ಅವರು ಕೂಡಲೇ ಹಿಂದುಗಳ ಬಳಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಹುಲ್‌ ಗಾಂಧಿ ವಿರುದ್ಧ ರಾಜ್ಯಾದ್ಯಂತ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೀರಿನ ಸುಳಿಗೆ ಸಿಲುಕಿ ಓರ್ವ ಸಾವು ; ಹೊಗೇನಕಲ್‌ ಫಾಲ್ಸ್‌ನಲ್ಲಿ ಘಟನೆ

ಹನೂರು : ತಾಲೂಕಿನ ಹೊಗೇನಕಲ್ ಫಾಲ್ಸ್‌ನ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ…

20 seconds ago

ಪ್ರಯೋಗಾಲಯ ತಂತ್ರಜ್ಞರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಪ್ರಯೋಗ ಶಾಲಾ ತಾಂತ್ರಿಕ ವಲಯದಲ್ಲಿ ಸೂಕ್ತ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

22 mins ago

ಬೆಂಗಳೂರು | 4 ವರ್ಷದ ಬಾಲಕಿ ಬರ್ಬರ ಹತ್ಯೆ ; ಅತ್ಯಾಚಾರ ಶಂಕೆ

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…

1 hour ago

ಇರಾನ್‌ ಮೇಲೆ ರಣಭೀಕರ ದಾಳಿಗೆ ಅಮೆರಿಕ ಪ್ಲ್ಯಾನ್‌

ವಾಷಿಂಗ್ಟನ್‌ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…

1 hour ago

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

3 hours ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

3 hours ago