Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ನಿರುದ್ಯೋಗ ಸಮಸ್ಯೆಗೆ ಬಿಜೆಪಿ ಆಡಳಿತವೇ ಕಾರಣ: ರಾಹುಲ್‌ ಗಾಂಧಿ ಕಿಡಿ

ಹರಿಯಾಣ: ಇಲ್ಲಿನ ನಿರುದ್ಯೋಗ ಸಮಸ್ಯೆಗೆ ಬಿಜೆಪಿ ಸರ್ಕಾರ ಆಡಳಿತವೇ ಕಾರಣ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಆಕ್ಟೋಬರ್.‌5ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ.

ಈ ಹಿನ್ನೆಲೆಯಲ್ಲಿ ಕರ್ನಾಲ್‌ನ ಅಸ್ಸಾಂದ್‌ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ರಾಜ್ಯದಲ್ಲಿ ಹಲವು ಸಮಸ್ಯೆಗಳು ತಲೆದೂರಿವೆ. ಹರಿಯಾಣ ಯುವಕರು ಅಮೇರಿಕಾಗೆ ವಲಸೆ ಹೋಗುತ್ತಿದ್ದಾರೆ.

ಇದಕ್ಕೆ ಬಿಜೆಪಿ ಸರ್ಕಾರವೇ ನೇರ ಕಾರಣ. ಈ ಬಗ್ಗೆ ವಲಸೆ ಹೋಗಿರುವ ಯುವಕರೇ ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಗಂಭೀರವಾಗಿ ಆರೋಪಿಸಿದರು.

ಇದೇ ವೇಳೆ ಹರಿಯಾಣಕ್ಕೆ ಕಾಂಗ್ರೆಸ್‌ ನೀಡಿರುವ ಭರವಸೆಗಳನ್ನು ಪುನರುಚ್ಛರಿಸಿ, ತಮ್ಮ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

 

Tags: