ಹರಿಯಾಣ: ಇಲ್ಲಿನ ನಿರುದ್ಯೋಗ ಸಮಸ್ಯೆಗೆ ಬಿಜೆಪಿ ಸರ್ಕಾರ ಆಡಳಿತವೇ ಕಾರಣ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಆಕ್ಟೋಬರ್.5ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ.
ಈ ಹಿನ್ನೆಲೆಯಲ್ಲಿ ಕರ್ನಾಲ್‌ನ ಅಸ್ಸಾಂದ್‌ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ರಾಜ್ಯದಲ್ಲಿ ಹಲವು ಸಮಸ್ಯೆಗಳು ತಲೆದೂರಿವೆ. ಹರಿಯಾಣ ಯುವಕರು ಅಮೇರಿಕಾಗೆ ವಲಸೆ ಹೋಗುತ್ತಿದ್ದಾರೆ.
ಇದಕ್ಕೆ ಬಿಜೆಪಿ ಸರ್ಕಾರವೇ ನೇರ ಕಾರಣ. ಈ ಬಗ್ಗೆ ವಲಸೆ ಹೋಗಿರುವ ಯುವಕರೇ ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಗಂಭೀರವಾಗಿ ಆರೋಪಿಸಿದರು.
ಇದೇ ವೇಳೆ ಹರಿಯಾಣಕ್ಕೆ ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಪುನರುಚ್ಛರಿಸಿ, ತಮ್ಮ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…
ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…
ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…
ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…
ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…