ರಾಜ್ಯ

ಮಹಾರಾಷ್ಟ್ರ ವಿಧಾನಸಭೆಯ ಸಭಾಪತಿಯಾಗಿ ರಾಹುಲ್‌ ನಾರ್ವೇಕರ್‌ ಅವಿರೋಧ ಆಯ್ಕೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸಭಾಪತಿಯಾಗಿ ರಾಹುಲ್‌ ನಾರ್ವೇಕರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಸಭಾಪತಿ ಹುದ್ದೆಗೆ ಭಾನುವಾರ ರಾಹುಲ್‌ ನಾರ್ವೇಕರ್‌ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಮಹಾವಿಕಾಸ್‌ ಅಘಾಡಿಯೂ ಯಾವುದೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿರಲಿಲ್ಲ. ಹೀಗಾಗಿ ಇಂದು ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರದ 15ನೇ ವಿಧಾನಸಭೆಯ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿ ಸತತ ಎರಡನೇ ಬಾರಿಗೆ ಸ್ಪೀಕರ್‌ ಹುದ್ದೆಯನ್ನು ಅಲಂಕರಿಸಿದ್ದಾರೆ.

1960ರಲ್ಲಿ ಮಹಾರಾಷ್ಟ್ರ ರಾಜ್ಯ ರಚನೆಯಾದ ನಂತರ ಬಾಬಾ ಸಾಹೇಬ್‌ ಭರಡೆ ಅವರನ್ನು ಹೊರತುಪಡಿಸಿ, ಬಿಜೆಪಿ ಶಾಸಕ ರಾಹುಲ್‌ ನಾರ್ವೇಕರ್‌ ಅವರು 2ನೇ ಬಾರಿಗೆ ಸಭಾಪತಿಯಾಗಿ ಆಯ್ಕೆಯಾಗಿರುವ ಏಕೈಕ ಸದಸ್ಯರಾಗಿದ್ದಾರೆ.

ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌ ಮಾತನಾಡಿ, 1960ರಲ್ಲಿ ರಾಜ್ಯ ಪುನರ್‌ ವಿಂಗಡಣೆಯಾದ ನಂತರ ಬಾಬಾ ಸಾಹೇಬ್‌ ಭರಡೆ ಅವರನ್ನು ಬಿಟ್ಟರೆ ಸತತ 2ನೇ ಬಾರಿಗೆ ವಿಧಾನಸಭಾ ಸಭಾಪತಿಯಾಗಿ ರಾಹುಲ್‌ ನಾರ್ವೇಕರ್‌ ಆಯ್ಕೆಯಾಗಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

7 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

7 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

9 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

12 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

13 hours ago