ರೈಲ್ವೆ ನೇಮಕಾತಿ ಮಂಡಳಿ (RRB) 6180 ತಂತ್ರಜ್ಞ ಗ್ರೇಡ್-1 ಮತ್ತು ಗ್ರೇಡ್-3 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ.
ಜೂ. 28 ರಿಂದ ಜುಲೈ 28ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಯೋಮಿತಿ 18 ರಿಂದ 30 ವರ್ಷ ನಿಗದಿಪಡಿಸಲಾಗಿದ್ದು, ಸರ್ಕಾರದ ನಿಯಮಾವಳಿ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ರಿಯಾಯಿತಿ ದೊರೆಯಲಿದೆ. ಈ ನೇಮಕಾತಿಯಲ್ಲಿ ತಂತ್ರಜ್ಞ ಗ್ರೇಡ್-1ಗೆ 180 ಹುದ್ದೆಗಳು ಮತ್ತು ಗ್ರೇಡ್-3ಯ 6000 ಹುದ್ದೆಗಳು ಸೇರಿವೆ.
ಈ ಎಲ್ಲಾ ಹುದ್ದೆಗಳನ್ನು ಭಾರತೀಯ ರೈಲ್ವೆಯ ವಿವಿಧ ರೈಲ್ವೆ ವಲಯಗಳಲ್ಲಿ ಭರ್ತಿ ಮಾಡಲಾಗುತ್ತದೆ. ತಂತ್ರಜ್ಞ ಗ್ರೇಡ್-1 ಹುದ್ದೆಗೆ 29200 ರೂ. , ತಂತ್ರಜ್ಞ ಗ್ರೇಡ್-3 ಹುದ್ದೆಗೆ 19,900 ರೂ. ಮಾಸಿಕ ವೇತನ ದೊರೆಯಲಿದೆ.
ಹೆಚ್ಚಿನ ಮಾಹಿತಿಗೆ ರೈಲ್ವೆ ಮಂಡಳಿಯ ಅಧಿಕೃತ ವೆಬ್‌ಸೈಟ್ rrbapply.gov.inಗೆ ಭೇಟಿ ನೀಡಿ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…