Mysore
24
overcast clouds

Social Media

ಸೋಮವಾರ, 14 ಸೆಪ್ಟೆಂಬರ್ 2026
Light
Dark

ಕೊಡಗು-ಮೈಸೂರು ಸೇರಿದಂತೆ ರಾಜ್ಯಾದ್ಯಂತ ಮೂರು ದಿನಗಳ ಕಾಲ ಮಳೆ!

ಬೆಂಗಳೂರು: ಕೊಡಗು, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

 

ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags:
error: Content is protected !!