ರಾಜ್ಯ

ಕೊಡಗು-ಮೈಸೂರು ಸೇರಿದಂತೆ ರಾಜ್ಯಾದ್ಯಂತ ಮೂರು ದಿನಗಳ ಕಾಲ ಮಳೆ!

ಬೆಂಗಳೂರು: ಕೊಡಗು, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

 

ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಅನಧಿಕೃತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ

ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ…

1 min ago

ಓದುಗರ ಪತ್ರ: ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕಿ

ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…

3 mins ago

ಓದುಗರ ಪತ್ರ: ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…

5 mins ago

ವಿದ್ಯುತ್ ಅವಘಡ ತಪ್ಪಿಸಲು ಸುರಕ್ಷತಾ ನಿಯಮ ಪಾಲಿಸಿ

ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …

9 mins ago

ಮಾರುಕಟ್ಟೆಗೆ ಲಗ್ಗೆಯಿಟ್ಟ ಕಡು ನೀಲಿ ಸುಂದರಿ!

ದಿನೇಶ್‌ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ…

14 mins ago