Mysore
19
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ರಾಜ್ಯದಲ್ಲಿ ಆಗಸ್ಟ್.‌27ರಿಂದ ಮತ್ತೆ ಮಳೆ ಮುನ್ಸೂಚನೆ

Rain

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದ್ದು, ಆಗಸ್ಟ್.‌27ರಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್.‌27ರಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್‌, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗಿನಲ್ಲೂ ಮಳೆಯ ಆರ್ಭಟ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಹಾಗೂ ನದಿ ತೀರದಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!