Mumbai Rain
ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದ್ದು, ಆಗಸ್ಟ್.27ರಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್.27ರಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗಿನಲ್ಲೂ ಮಳೆಯ ಆರ್ಭಟ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಹಾಗೂ ನದಿ ತೀರದಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…