Mysore
29
broken clouds

Social Media

ಸೋಮವಾರ, 15 ಜೂನ್ 2026
Light
Dark

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ ಬೇಗೆಗೆ ಹೈರಾಣಾಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಸುಡುಬಿಸಿಲು ಜನರನ್ನು ಇನ್ನಿಲ್ಲದಂತೆ ಸುಸ್ತಾಗಿಸುತ್ತಿದೆ. ಹೀಟ್‌ ವೇವ್‌ ಆರಂಭವಾಗಿದ್ದು, ಜನಜೀವನ ಸಂಕಷ್ಟಕ್ಕೀಡಾಗಿದೆ.

ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ ರಾಜ್ಯದಲ್ಲಿ ಇಂದು ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲ ಭಾಗಗಳಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

 

 

Tags:
error: Content is protected !!